ಉಡುಪಿ: ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳಿಗೆ ಅನಾರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಇಂದು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೇಜಾವರ ಶ್ರೀಗಳಿಗೆ ಆಗಾಗ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದು, ಇಂದು ಮುಂಜಾನೆ 3 ಗಂಟೆಗೆ ಶ್ರೀಗಳಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.