ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ ಪ್ರತಿಭಟನೆಗಳು ಮುಂದುವರಿದಿವೆ. ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಪ್ರತಿಭಟನೆ ನಡೆಸಲಾಯಿತು. ಭಜರಂಗದಳ ಹಾಗೂ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಉಗ್ರರ, ದೇಶ ದ್ರೋಹಿಗಳ ಹೀನ ಕೃತ್ಯವನ್ನು ಖಂಡಿಸಲಾಯಿತು.ಉಗ್ರ ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಯುದ್ಧ ಸಾರುವಂತೆ ಒತ್ತಾಯ ಮಾಡಲಾಯಿತು. ದೇಶದ ಪ್ರತಿಯೊಬ್ಬರ ಮನೆಯಲ್ಲೂ ದೀಪ ಹಚ್ಚಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಲು ಒತ್ತಾಯ ಮಾಡಲಾಯಿತು. ದೇಶದ್ರೋಹಿಗಳನ್ನು ಸದೆ