ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ಇಂದು ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಿದೆ. ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯುತ್ತಿದೆ. ಇಂದಿನಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ. ಕ್ರಮವಾಗಿ ಇಂಡಿ, ಸಿಂಧಗಿ, ದೇವರಹಿಪ್ಪರಗಿ, ನಾಗಠಾಣ, ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ - ಬಬಲೇಶ್ವರದಲ್ಲಿ ರಥಯಾತ್ರೆ