ಬೆಂಗಳೂರು : ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಥಳಿಸಿ, ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ತಪಿಸ್ಥರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೃತ್ಯ ಖಂಡಿಸಿ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ, ಈ ಕೃತ್ಯ ಅತ್ಯಂತ ಅಮಾನವೀಯ. ಈ ಕುರಿತು ತನಿಖೆ ನಡೆಸಿ ತಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿದ್ದೇನೆ. ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ. ಇಂಥ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು