ತುಮಕೂರು : ಮುಖ್ಯಮಂತ್ರಿಯಾಗುವ ಅವಕಾಶ ಪದೇ ಪದೇ ಕೈ ತಪ್ಪಿದ್ದಕ್ಕೆ ಡಾ.ಜಿ.ಪರಮೇಶ್ವರ್ ಅವರು ಅಸಮಾಧಾನ ಹೊರಹಾಕಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಮಾತನಾಡಿದ ಅವರು, ನನಗೆ 3 ಸಲ ಮುಖ್ಯಮಂತ್ರಿಯಾಗುವ ಅವಕಾಶವಿತ್ತು. ರಾಜಕೀಯ ಚದುರಂಗದಾಟದ ನಡುವೆ ನನಗೆ ಅವಕಾಶ ಕೈತಪ್ಪಿದೆ. ವಿಭಿನ್ನ ರೀತಿಯ ರಾಜಕೀಯ ನಡೆಗಳಿಂದ ನನಗೆ ಅವಕಾಶ ಕೈತಪ್ಪಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಉನ್ನತ ಸ್ಥಾನ ನೀಡಲು ಜಾತಿ ಪ್ರಮುಖ ಪಾತ್ರವಹಿಸುತ್ತದೆ. ಅಧಿಕಾರದಲ್ಲಿರುವ ರಾಜಕಾರಣಿಗಳ ಸಮುದಾಯಕ್ಕೆ