ಹೊನ್ನಾವರ ಪಟ್ಟಣದ ಯುವಕ ಪರೇಶ್ ಮೇಸ್ತನ ಅನುಮಾನಾಸ್ಪದ ಸಾವಿನ ಪ್ರಕರಣದ ಶೀಘ್ರ ತನಿಖೆಗೆ ಒತ್ತಾಯಿಸಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ತೆಂಗೇರಿ ನೇತೃತ್ವದಲ್ಲಿ ಇಲ್ಲಿನ ಶರಾವತಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡರು. ಕೇಂದ್ರದ ಮೋದಿ ಸರಕಾರದ ಅಧೀನದಲ್ಲಿರುವ ಸಿಬಿಐಗೆ ಪರೇಶ್ ಮೇಸ್ತನ ಸಾವಿನ ತನಿಖೆಯ ಜವಾಬ್ದಾರಿ ನೀಡಿದರೆ ವಾರದಲ್ಲಿ ನ್ಯಾಯ ಕೊಡಿಸುವುದಾಗಿ ಬಿಜೆಪಿ ಮುಖಂಡರು ಭರವಸೆ ನೀಡಿದ್ದರು. ಆದರೀಗ ಏಳು ತಿಂಗಳು ಕಳೆದರೂ ಈ ಕುರಿತು ಸೊಲ್ಲೆತ್ತುತ್ತಿಲ್ಲ. ಇದನ್ನು