ಬೆಂಗಳೂರು: ರಾಜ್ಯ ಸರ್ಕಾರ ಕೊರೋನಾ ನಡುವೆಯೂ ಜುಲೈನಲ್ಲಿ ಶಾಲೆ ಆರಂಭಿಸಲು ತೀರ್ಮಾನಿಸುವುದರ ಬಗ್ಗೆ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸಚಿವ ಸುರೇಶ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶಾಲೆ ಆರಂಭ ಸದ್ಯಕ್ಕಿಲ್ಲ ಎಂಬ ತೀರ್ಮಾನಕ್ಕೆ ಸಚಿವರು ಬಂದಿದ್ದಾರೆ. ಶಿಕ್ಷಣ ಸಚಿವರಿಗೆ ಫೇಸ್ ಬುಕ್ ಮುಖಾಂತರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಕ್ಕಳ ಜೀವದ ಜತೆ ಪ್ರಯೋಗ ನಡೆಸುತ್ತಿರುವುದೇಕೆ ಎಂದು ಹಲವರು ಪ್ರಶ್ನಿಸಿದ್ದರು. ಕೆಲವರಂತೂ ಸಾಮಾಜಿಕ ಜಾಲತಾಣದಲ್ಲಿ ಮಕ್ಕಳನ್ನು ಶಾಲೆಗೆ