ಮೈಸೂರು : ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಅಪ್ರಾಪ್ತ ಮಗಳನ್ನು ತಂದೆ ಮತ್ತು ತಾಯಿ ಇಬ್ಬರು ಸೇರಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.ಎರಡನೇ ಪಿಯು ವಿದ್ಯಾರ್ಥಿನಿ ಶಾಲಿನಿ (17) ಕೊಲೆಗೀಡಾದ ಅಪ್ರಾಪ್ತೆ. ಈಗಾಗಲೇ ಮಗಳನ್ನು ಕೊಂದ ಆರೋಪದ ಮೇಲೆ ತಂದೆ ಸುರೇಶ್ ಹಾಗೂ ತಾಯಿ ಬೇಬಿಯನ್ನು ಬಂಧಿಸಿದ್ದಾರೆ.ಕೊಲೆಗೀಡಾದ ಅಪ್ರಾಪ್ತೆಯು ಪಕ್ಕದ ಗ್ರಾಮದ ಮೆಲ್ಲಹಳ್ಳಿಯ ಯುವಕ ಮಂಜು ಅನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರ ಪ್ರೀತಿಗೆ ಶಾಲಿನಿ ಪೋಷಕರು ವಿರೋಧಿಸಿದ್ದರು. ಪ್ರೇಮಿಗಳು ಮದುವೆಯಾಗಲು