ತಳವಾರ , ಪರಿವಾರ ಹಾಗೂ ಕಾರವಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಿದ್ದಿ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಯ ಅನುಸಾರ ರಾಜ್ಯದಲ್ಲೂ ಗೆಜೆಟ್ ಅಧಿಸೂಚನೆ ಹೊರಡಿಸಲು ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ. ಕುಲಶಾಸ್ತ್ರಿ ಅಧ್ಯಯನದಂತೆ ಪರಿವಾರ ಮತ್ತು ತಳವಾರ ಜಾತಿಗಳು ನಾಯಕ ಮತ್ತು ನಾಯಿಕಡದ ಪರ್ಯಾಯವಾಗಿವೆ. ಈ ಪ್ರಸ್ತಾವನೆಯು ಕಳೆದ ಹಲವಾರು ದಶಕಗಳಿಂದ ಬೇಡಿಕೆಯಲ್ಲಿತ್ತು. ರಾಜ್ಯ ಸರ್ಕಾರವು