ಬೆಂಗಳೂರು : ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಸಂತಾಪ ಸೂಚಿಸಿದ್ದಾರೆ. ರೈತಪರ ಹೋರಾಟವನ್ನೇ ಜೀವನವಾಗಿಸಿಕೊಂಡಿದ್ದ ನಾಯಕ. ಇಂತಹ ನಾಯಕರೊಬ್ಬರನ್ನು ಈ ನಾಡು ಕಳೆದುಕೊಂಡಿದೆ. ರೈತಪರ ಹೋರಾಟಕ್ಕೆ ಕೆ.ಎಸ್.ಪುಟ್ಟಣ್ಣಯ್ಯರ ಕೊಡುಗೆ ಅಪಾರ. ಸರಳ ಸಜ್ಜನಿಕೆಯ ನೇರ ನುಡಿಯ ವ್ಯಕ್ತಿತ್ವ ಹೊಂದಿದ್ದ ಶಾಸಕ. ಇವರ ಅಗಲಿಕೆ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು