ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಟಿಕೆಟ್ ಕೈ ತಪ್ಪಿದ ಕೆಲವು ಹಾಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಾರಿ ಕೆಲವರಿಗೆ ಪಕ್ಷ ಟಿಕೆಟ್ ನೀಡಿಲ್ಲ, ಅವರಿಗೆ ಬೇರೆ ಜವಾಬ್ದಾರಿ ನೀಡಲಾಗುತ್ತದೆ. ಇದರರ್ಥ ಕೇಂದ್ರಕ್ಕೂ ಕರೆಸಿಕೊಳ್ಳಬಹುದು. ಹಾಗಾಗಿ ಪರಿವರ್ತನೆಗೆ ಯಾರೂ ಬೇಸರಗೊಳ್ಳಬೇಡಿ ಎಂದು ರಾಜ್ಯ ಚುನಾವಣೆ ಸಹ ಉಸ್ತುವಾರಿ ಅಣ್ಣಾಮಲೈ ತಿಳಿಸಿದರು....ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯದಲ್ಲಿ ಜಿಲ್ಲಾ ಸಮಿತಿಗಳಿಂದ