ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಪಾರ್ವತಮ್ಮನವರ ಅಂತ್ಯಕ್ರಿಯೆ ನೆರವೇರಿದೆ. ದಾಸಯ್ಯ ಸಂಪ್ರದಾಯದಂತೆ ಕಿರಿಯ ಪುತ್ರ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು. ಮೂರು ಸುತ್ತು ಕುಶಾಲತೋಪು ಹಾರಿಸುವ ಮೂಲಕ ಗೌರವ ಸಲ್ಲಿಸಲಾಯ್ತು.ರಾಜ್ ಕುಟುಂಬದ ಜೊತೆ ನಟ ಅಂಬರೀಷ್, ಸಾ.ರಾ. ಗೋವಿಂದು ಸೇರಿದಂತೆ ಚಿತ್ರೋದ್ಯಮದ ಹಲವು ಗಣ್ಯರು ಅಂತ್ಯಸಂಸ್ಕಾರದ ವೇಳೆ ಹಾಜರಿದ್ದರು.