ವರನಟ ಡಾ.ರಾಜ್ ಕುಮಾರ್ ಪತ್ನಿ, ಪ್ರಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ ಅವರು ಅಸ್ವಸ್ಥರಾಗಿದ್ದು ನಿನ್ನೆ ತಡರಾತ್ರಿ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ, ರಕ್ತದೊತ್ತಡ ತಗ್ಗಿದ ಹಿನ್ನಲೆಯಲ್ಲಿ ಪುತ್ರ ರಾಘವೇಂದ್ರ ರಾಜಕುಮಾರ್ ತಮ್ಮ ತಾಯಿ ಪಾರ್ವತಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ನಿನ್ನೆ ರಾತ್ರಿಯೇ ವೈದ್ಯರು ಅವರಿಗೆ ವಿವಿಧ ಪರೀಕ್ಷೆಗಳನ್ನು ಮಾಡಿದ್ದು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ, ಹಿರಿಯ ಪುತ್ರ