ಒಡಿಶಾದ ಬಾಲಸೋರ್ನಲ್ಲಿ ತ್ರಿವಳಿ ರೈಲು ಅಪಘಾತದಿಂದ ಹಾನಿಗೊಳಗಾಗಿದ್ದ ಹಳಿಯನ್ನು ದುರಸ್ತಿ ಮಾಡಲಾಗಿದ್ದು, ಪ್ಯಾಸೆಂಜರ್ ರೈಲು ಸಂಚಾರವನ್ನು ರೈಲ್ವೆ ಇಲಾಖೆ ಆರಂಭಿಸಿದೆ. ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರಂತರ ಶ್ರಮದಿಂದ ಹಾನಿಗೊಳಗಾಗಿದ್ದ ಮಾರ್ಗವನ್ನು ಬೇಗ ದುರಸ್ತಿ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಟ್ವಿಟ್ ಮೂಲಕ ತಿಳಿಸಿದ್ದರು. ಅದರಂತೆ, ಬೆಂಗಳೂರು ಹೌರಾ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾದ ಮಾರ್ಗದಲ್ಲಿ ಭಾನುವಾರ ರಾತ್ರಿ 10.40ಗಂಟೆಗೆ ವಿಶಾಖಪಟ್ಟಣದ ಬಂದರಿನಿಂದ ಕಲ್ಲಿದ್ದಲು ತುಂಬಿದ್ದ ಗೂಡ್ಸ್ ರೈಲು