Widgets Magazine

ಜಿಲ್ಲಾ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿಗೆ ರೋಗಿಗಳು ಕಂಗಾಲು

ಕಲಬುರ್ಗಿ| Jagadeesh| Last Modified ಗುರುವಾರ, 7 ಮಾರ್ಚ್ 2019 (15:16 IST)
ಏಕಾಏಕಿಯಾಗಿ ಜಿಲ್ಲಾ
ಆಸ್ಪತ್ರೆಯಲ್ಲಿ ಹೊತ್ತಿಕೊಂಡ ಬೆಂಕಿಗೆ ರೋಗಿಗಳು ಗಾಬರಿಯಾದ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ. ಕಲಬುರ್ಗಿಯ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಘಟನೆ ನಡೆದಿದೆ. ಎ.ಸಿ.ಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಘಟನೆಯು ಇ.ಎನ್.ಟಿ ವಿಭಾಗದಲ್ಲಿ ನಡೆದಿದೆ.

ಅವಘಡದಲ್ಲಿ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿಯಾದರು.
ಘಟನೆಯ ಹಿನ್ನೆಲೆಯಲ್ಲಿ ಆಸ್ಪತ್ರೆ ಹೊರಗೆ ಬಂದು ನಿಂತರು ಸಿಬ್ಬಂದಿ ಮತ್ತು ರೋಗಿಗಳು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ಬ್ರಹ್ಮಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.


ಇದರಲ್ಲಿ ಇನ್ನಷ್ಟು ಓದಿ :