ಬೆಂಗಳೂರು : ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಪಡೆಯುವ ಆರೋಪ ಹೊತ್ತಿರುವ ಸರ್ಕಾರದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರ ಅಣಕಿಸುವ ಪೋಸ್ಟರ್ನ್ನು ನಗರದ ಹಲವೆಡೆ ಅಂಟಿಸಲಾಗಿದೆ. ಪೇಟಿಎಂ ಮಾದರಿಯಲ್ಲೇ ಪೇ ಸಿಎಂ ಎಂಬ ಪೋಸ್ಟರ್ ವೈರಲ್ ಆಗಿದೆ.ನಗರದ ಜಯಮಹಲ್ ರಸ್ತೆ, ಇಂಡಿಯನ್ ಎಕ್ಷ್ಪ್ರೆಸ್ ಬಳಿ ಗೋಡೆಗೆ ಪೇ ಸಿಎಂ ಎಂದು ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ಪೋಸ್ಟರ್ ಅಂಟಿಸುವ ಮೂಲಕ ಭ್ರಷ್ಟ ಸರ್ಕಾರ ಎಂದು ಅಣಕಿಸಲಾಗಿದೆ.