Widgets Magazine

ದೆಹಲಿ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ಪಿಸಿ ಚಾಕೋ ರಾಜೀನಾಮೆ

ನವದೆಹಲಿ| pavithra| Last Modified ಗುರುವಾರ, 13 ಫೆಬ್ರವರಿ 2020 (09:01 IST)
ನವದೆಹಲಿ : ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನುಭವಿಸಿದ ಹಿನ್ನಲೆಯಲ್ಲಿ ದೆಹಲಿ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ಪಿಸಿ ಚಾಕೋ ರಾಜೀನಾಮೆ ನೀಡಿದ್ದಾರೆ.


ಇತ್ತೀಚೆಗೆ ನಡೆದ ದೆಹಲಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 58 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದರೆ ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದರೆ ಕಾಂಗ್ರೆಸ್ ಮಾತ್ರ ಯಾವುದೇ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸದೆ ಸಾಧನೆ ಮಾಡಿದೆ.


ಇದು ಪಕ್ಷವನ್ನು ತುಂಬಾ ಮುಜುಗರಕ್ಕೀಡು ಮಾಡಿದ್ದು, ಇದೀಗ ದೆಹಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡ ಪಿಸಿ ಚಾಕೋ ಸೋಲಿನ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :