ಮೈಸೂರು : ಸಿಎಂ ಸಿದ್ದರಾಮಯ್ಯ ಬಂದ್ರೂ ನಮ್ಮನ್ನು ಸೋಲಿಸಲಾಗುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ,ಪ್ರಜಾಪ್ರಭುತ್ವದಲ್ಲಿ ಯಾರು ಗೆಲ್ಲಬೇಕು ಸೋಲಬೇಕು ಎನ್ನುವುದು ಜನ ತೀರ್ಮಾನ ಮಾಡುತ್ತಾರೆ. ಮತಗಳೇನು ಕುಮಾರಸ್ವಾಮಿ ಜೇಬಿನಲ್ಲಿಲ್ಲ. ಮೊಯ್ಲಿ ವಿರುದ್ಧ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೋತಾಗ ಇವರೆಲ್ಲಿ ಹೋಗಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ. ಬಾದಾಮಿಯಲ್ಲಿ ಸ್ಪರ್ಧೆ ಮಾಡ್ತೀನಿ ಅಂತಾ