ಭೀಕರ ಬರಗಾಲದಿಂದ ತತ್ತರಿಸಿರುವ ಜನ ತಮ್ಮ ಹೊಟ್ಟೆಪಾಡಿಗಾಗಿ ಗುಳೆ ಹೋಗುತ್ತಿರುವ ಪರಿಸ್ಥಿತಿ ಮತ್ತೆ ನಿರ್ಮಾಣವಾಗಿದೆ.ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಗುಳೆ ಹೋಗುವುದು ಸರ್ವೇ ಸಾಮಾನ್ಯವಾಗಿದೆ.ಹೇಳುವುದಕ್ಕೆ ಮಾತ್ರ ಇದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡರ ಸ್ವಕ್ಷೇತ್ರ. ಆದರೆ ಇಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲ. ಈ ಬಾರಿ ಮಳೆ ಕೈಕೊಟ್ಟಿರುವ ಕಾರಣ, ಅನ್ನದಾತ ರೋಸಿ ಹೋಗಿದ್ದಾನೆ. ಕೃಷಿಯನ್ನೇ ನಂಬಿಕೊಂಡಿದ್ದ ಅನೇಕ ರೈತರು, ಕೂಲಿಕಾರರು, ಕುಟುಂಬ ಸಮೇತವಾಗಿ ಗಂಟು ಮೂಟ್ಟೆ