ಬಿಜೆಪಿಯವರು ಜೈಲಿಗೆ ಹೋಗಿ ಬಂದವರೆನ್ನುವುದು ಜನತೆಗೆ ಗೊತ್ತಿದೆ ಎಂದು ಸಾರಿಗೆ ಖಾತೆ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಜೈಲಿಗೆ ಹೋಗಿ ಬಂದವರೆನ್ನುವುದು ಜನತೆಗೆ ಗೊತ್ತಿದೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಡಿಸಿಎಂ ಹುದ್ದೆ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು. ರಾಜ್ಯದ ನಾಯಕರಿಗೆ ಡಿಸಿಎಂ ಹುದ್ದೆಯ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಸೂಕ್ತ ಸಮಯದಲ್ಲಿ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ