ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗಡಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಮತ್ತೆ ಮುಂದುವರಿದಿದೆ.ಬೆಳಗಾವಿ ಜಿಲ್ಲೆಯಾದ್ಯಾಂತ ಪ್ರವಾಹದ ಭೀತಿ ಎದುರಾಗಿದೆ. ಘಟಪ್ರಭೆ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು ಗೋಕಾಕ ಜಲಪಾತವು ರಭಸದಿಂದ ಧುಮ್ಮಿಕ್ಕುತ್ತಿದೆ.ಕಳೆದ ಎರಡು ದಿನಗಳಿಂದ ಬೆಳಗಾವಿ ಜಿಲ್ಲೆ ಮತ್ತು ಮಹರಾಷ್ಟ್ರ ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರ ಪರಿಣಾಮದಿಂದ ಜಿಲ್ಲೆಯ ಎಲ್ಲ ನದಿಗಳು ತುಂಬಿವೆ. ಮತ್ತೆ ಪ್ರವಾಹದ ಭೀತಿಯಲ್ಲಿದ್ದು ನದಿ ತಟದ ಗ್ರಾಮದ ಜನರು ಕೈಯಲ್ಲಿ ಜೀವ ಹಿಡಿದುಕೊಂಡು ಕುಳಿತುಕೊಳ್ಳುವಂತ ಪರಿಸ್ಥಿತಿ