ಚಿಕ್ಕಬಳ್ಳಾಪುರ: ಇತ್ತೀಚೆಗೆ ಆಗಾಗ ಭೂಮಿಯಿಂದ ಭಾರೀ ಶಬ್ಧ ಕೇಳುತ್ತಿರುವ ಪ್ರಕರಣಗಳು ವರದಿಯಾಗುತ್ತವೆ. ಇದೀಗ ಮತ್ತೊಮ್ಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಬ್ಧವೊಂದು ಕೇಳಿ ಬಂದಿದೆ. ಇಲ್ಲಿನ ಹಳ್ಳಿಗಳಲ್ಲಿ ತಡರಾತ್ರಿ ನಿಗೂಢ ಶಬ್ಧ ಕೇಳಿ ಬಂದಿದ್ದು, ಈ ಭಾಗದ ಜನರು ಭಯಭೀತರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಪೆದ್ದತುಮಕೆಪಲ್ಲಿ, ಕದಿರನ್ನಗಾರಪಲ್ಲಿ ಗ್ರಾಮಗಳಲ್ಲಿ ತಡರಾತ್ರಿ ಎರಡು ಬಾರಿ ಭಾರೀ ಶಬ್ಧ ಕೇಳಿ ಬಂದಿದ್ದು, ಶಬ್ಧದ ತೀವ್ರತೆಗೆ ಭೂಮಿ ಕಂಪಿಸಿದ ಅನುಭವವೂ ಆಗಿದೆ. ಈ ಭಾರೀ