ನೆರೆ ಹಾವಳಿಯಿಂದ ಬದುಕು ಕಳೆದುಕೊಂಡ ಉತ್ತರ ಕರ್ನಾಟಕದ ಜನತೆ ಮತ್ತೆ ಸುರಿಯುತ್ತಿರುವ ಧಾರಾಕಾರ ಮಳೆಗೆ ತತ್ತರಿಸಿದ್ದಾರೆ. ಬೆಳಗಾವಿ ಜಿಲ್ಲೆಯಾದ್ಯಾಂತ ಭಾರಿ ಪ್ರಮಾಣದ ಮಳೆಯಾಗಿದ್ದು, ರಸ್ತೆ ಸಂಚಾರ ಖಡಿತಗೊಂಡಿದೆ. ಸಂಕೇಶ್ವರ ನಗರವಂತೂ ಮಳೆಯ ಆರ್ಭಟಕ್ಕೆ ಅಕ್ಷರಶಃ ನಲುಗಿಹೋಗಿದೆ.ಉತ್ತರ ಕರ್ನಾಟಕದ ಜನತೆ ಕೈಯಲ್ಲಿ ಜೀವ ಹಿಡಿದು ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ಕೆಲವೆಡೆ ರಸ್ತೆ, ಸೇತುವೆಗಳು ಸಂಪೂರ್ಣ ಮುಳುಗಿವೆ. ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಲೇ ಇದ್ದು, ನದಿ ತಟದ