ಸಕ್ಕರೆ ನಾಡು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮಂಚನಹಳ್ಳಿ ಗ್ರಾಮದಲ್ಲಿ ನಿರಂತರವಾಗಿ ಕಾಡಾನೆಗಳು ರಾತ್ರಿ ವೇಳೆಯಲ್ಲಿ ಕಾಡಿನಿಂದ ಆಹಾರಕ್ಕಾಗಿ ನಾಡಿಗೆ ಬಂದು ರೈತರು ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕ್ಷಣಾರ್ಧದಲ್ಲಿ ನಾಶ ಪಡಿಸುತ್ತಿವೆ. ಮಳವಳ್ಳಿ ತಾಲ್ಲೂಕಿನಲ್ಲಿರುವ ಶಿಂಷಾ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಹೆಬ್ಬಣಿ, ಮಂಚನಹಳ್ಳಿ, ನೆಟ್ಕಲ್ , ಶಿಂಷಾ ಸೇರಿದಂತೆ ಅನೇಕ ಗ್ರಾಮಗಳಿಗೆ ರಾತ್ರಿ ವೇಳೆಯಲ್ಲಿ ಕಾಡಾನೆಗಳ ಅಟ್ಟಹಾಸ ಹೆಚ್ಚಾಗುತ್ತಿದೆ. ಇಲ್ಲಿ ಸಂಜೆ ಆರು ಗಂಟೆಯಾದ ಮೇಲೆ ಯಾರೂ ತಿರುಗಾಡುವುದಿಲ್ಲ.