ಭೂತ, ಕೋಲ ಸಂಸ್ಖೃತಿ ಹಿಂದೂ ಧರ್ಮದ ಸಂಪ್ರದಾಯವಲ್ಲ ಎಂಬ ನಟ ಚೇತನ್ ಹೇಳಿಕೆ ವಿಚಾರಕ್ಕೆ ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಸ್ಕ್ರತಿ ಇಲ್ಲದವರು ಸಂಸ್ಕ್ರತಿ ಬಗ್ಗೆ ಮಾತನಾಡಬಾರದು. ದೈವ ನರ್ತನ ಹಿಂದೂ ಸಂಸ್ಕ್ರತಿಯ ಒಂದು ಭಾಗ. ಇದನ್ನು ಮತ್ತಷ್ಟು ಗಟ್ಟಿ ಮಾಡುತ್ತೇವೆ. ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಯಾರೋ ಒಬ್ಬ ವ್ಯಕ್ತಿ ಹಾಗೆ ಹೇಳಿದ್ರೆ ಆ ಸಂಸ್ಕೃತಿಯಿಂದ ಯಾರೂ ದೂರ ಆಗಲ್ಲ. ಭೂತಾರಾಧನೆ