ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದನ್ನು ಗಮನಿಸಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಇಲಾಖೆಯ