ಕರ್ನಾಟಕದಲ್ಲಿ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಹೋಗುವ ವಿಚಾರದಲ್ಲಿ ಈ ಹಿಂದೆ ಸಾಕಷ್ಟು ಗಲಾಟೆಗಳು ನಡೆದಿವೆ. ಆದರೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಇಎ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿಯನ್ನು ನೀಡಿದೆ. ಇದೇ ತಿಂಗಳು ಅಕ್ಟೋಬರ್ 28 ಮತ್ತು ಅಕ್ಟೋಬರ್ 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಅಭ್ಯರ್ಥಿಗಳು ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ. ರಾಜ್ಯದಲ್ಲಿ ಹಿಜಾಬ್