ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರ ನಿಡ್ಡೇಲ್ ಮೈದಾ ಫಾಕ್ಟರಿಯ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬ್ಯಾಗ್ ನ್ನು ಸುಲಿಗೆ ಮಾಡಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ವಾಮಂಜೂರು ಮಸೀದಿ ಕಂಪೌಡು ನಿವಾಸಿ ಆರೀಫ್ (24) ಬಂಧಿತ ಆರೋಪಿ. ಬಂಧಿತನಿಂದ ನಂಬರ್ ಇಲ್ಲದ ಹೋಂಡಾ ಆಕ್ಟಿವಾ, ಕೃತ್ಯ ನಡೆಸಲು ಉಪಯೋಗಿಸಿದ ಎರಡು ಹೆಲ್ಮೆಟ್, ಸುಲಿಗೆ ಮಾಡಿದ ಬ್ಯಾಗ್ ಗಳಲ್ಲಿದ್ದ ಎಂಟು ವಿವಿಧ ಕಂಪೆನಿಗಳ ಮೊಬೈಲ್ ಫೋನ್ ಹಾಗೂ ಎ.ಟಿ.ಎಂ.