ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ ಪ್ರಬಲರಾಗಿದ್ದಾರೆ. ಪರಮೇಶ್ವರಗೆ ತನ್ನದೇ ಆದ ವರ್ಚಸ್ಸಿದೆ. ಸಚಿವರಾಗಿ, ಡಿಸಿಎಂ ಆಗಿ ಕೆಲಸ ಮಾಡಿದವರು. ಅಲ್ಲದೇ ಪಕ್ಷದಲ್ಲಿ ಪ್ರಭಾವಿ ನಾಯಕರಾಗಿದ್ದು, ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿಗಳ ಲಿಸ್ಟ್ನಲ್ಲಿದ್ದಾರೆ. ಕಳೆದ ಎರಡು ವರ್ಷದಿಂದಲೇ ಚುನಾವಣೆ ತಯಾರಿ ಮಾಡಿಕೊಂಡಿರುವ ಜಿ.ಪರಮೇಶ್ವರ, ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಈ ಹಿಂದಿನದಕ್ಕಿಂತಲೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿರುವುದು ಚುನಾವಣೆಯಲ್ಲಿ ಅವರ ಕೈ ಹಿಡಿಯಬಹುದು. ಇನ್ನೊಂದು ದೃಷ್ಟಿಕೋನದಲ್ಲಿ ನೋಡುವುದಾದರೆ, ಜಿ.ಪರಮೇಶ್ವರ ಸಮುದಾಯದ ಮತ ಅತಿ