ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮೂರು ಲಕ್ಷ ಕೋಟಿ ಅನುದಾನ ನೀಡಿರುವುದು ಅದು ರಾಜ್ಯಕ್ಕೆ ನೀಡಿರುವ ಪಾಲು, ಲೆಕ್ಕ ಕೇಳುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಇದನ್ನು ಅರಿತುಕೊಳ್ಳಬೇಕು ಎಂದು ಜೆಡಿಎಸ್ ಮುಖಂಡ ಪಿ.ಜಿ.ಆರ್.ಸಿಂಧ್ಯಾ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದವರು ಕೇಂದ್ರದ ಗುಲಾಮರಲ್ಲ. ಅನುದಾನದ ಲೆಕ್ಕ ಕೊಡಿ ಎಂದು ಕೇಳುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದಾರೆ. ಆರ್ಎಸ್ಎಸ್ ನಿಷೇಧ ಮಾಡಬೇಕು ಎಂದು ಕೆಪಿಸಿಸಿ