ರಾಜ್ಯ ಸರ್ಕಾರದಿಂದ ಪೋನ್ ಕದ್ದಾಲಿಕೆ ನಡೆಯುತ್ತಿದೆ. ನಾನು ಹಾಗೂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಫೋನ್ ಟ್ರ್ಯಾಕಿಂಗ್ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾಡಿರುವ ಆರೋಪಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.ರಾಮನಗರದ ಕೈಲಾಂಚದಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಹೆಚ್.ಡಿ.ಕೆ., ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದೆ. ಯಡಿಯೂರಪ್ಪ ಅವ್ರು ಪ್ರಧಾನಿ ಮೋದಿಯವರನ್ನ ಭೇಟಿ ಮಾಡ್ಲಿ. ಯಾರದ್ದೂ ಟ್ರಾಪ್ ಆಗುತ್ತಿದೆ ಎಂದು ತನಿಖೆ ನಡೆಸಲು ಅವರಿಗೆ ಅವಕಾಶ