ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದ ಫೋಟೋವನ್ನ ಕಸದ ಬಂಡಿಯಲ್ಲಿ ಸಾಗಿಸಿ ಸುರಿದಿದ್ದಕ್ಕೆ ವ್ಯಕ್ತಿಯೋರ್ವರು ಕೆಲಸ ಕಳೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮಥುರಾದಲ್ಲಿ ವ್ಯಕ್ತಿಯೊಬ್ಬ ಕಸದ ಬಂಡಿಯನ್ನು ತಳ್ಳುತ್ತಿರುವ ದೃಶ್ಯ ಕಂಡು ಬಂದಿತ್ತು. ಬಿಸಾಡಿದ ವಸ್ತುಗಳ ರಾಶಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಫ್ರೇಮ್ ಹಾಕಿದ ಫೋಟೊಗಳಿದ್ದವು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮುನ್ಸಿಪಲ್ ಕಾರ್ಪೊರೇಷನ್ ಉದ್ಯೋಗಿ