ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ತನಿಖೆ ಮುಂದುವರಿಸಿರುವ ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಬೆಂಗಳೂರು ಸೇರಿದಂತೆ ವಿವಿಧ ಕೇಂದ್ರಗಳಲ್ಲೂ ಅಕ್ರಮ ನಡೆದಿರುವುದು ಬೆಳಕಿಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. 22 ಅಭ್ಯರ್ಥಿಗಳ ಒಎಂಆರ್ ಪ್ರತಿಯಲ್ಲಿ ವ್ಯತ್ಯಾಸ