ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇಯಲ್ಲಿ ಟೇಕ್ ಆಫ್ ಆಗುತ್ತಿದ್ದ ಪ್ಯಾಸೆಂಜರ್ ವಿಮಾನವೊಂದು ಅಗ್ನಿಶಾಮಕ ಟ್ರಕ್ಗೆ ಡಿಕ್ಕಿ ಹೊಡೆದು ಇಬ್ಬರು ಸಿಬ್ಬಂದಿ ಸಾವಾಗೀಡಾಗಿರುವ ಘಟನೆ ಪೆರುವಿನ ಜಾರ್ಜ್ ಚಾವೆಜ್ನಲ್ಲಿ ನಡೆದಿದೆ. ದುರ್ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ವೀಡಿಯೋದಲ್ಲಿ ಅಗ್ನಿಶಾಮಕ ಟ್ರಕ್ ರನ್ವೇಯಲ್ಲಿ ವೇಗವಾಗಿ ಸಾಗುತ್ತಿರುವುದು ಕಂಡುಬಂದಿದ್ದು, ಎದುರುಗಡೆ ಲ್ಯಾಂಡ್ ಆಗುತ್ತಿದ್ದ ವಿಮಾನವನ್ನು ಕಂಡ ಅಗ್ನಿಶಾಮಕ ಟ್ರಕ್ನಲ್ಲಿದ್ದವರು ಅಪಘಾತವನ್ನು ತಪ್ಪಿಸಲು ವಾಹನವನ್ನು ಯೂ ಟರ್ನ್ ಹೊಡೆದಿದ್ದಾರೆ. ಆದರೂ ಅಪಘಾತವನ್ನು ತಪ್ಪಿಸಲು ಸಾಧ್ಯವಾಗದೇ