ಬಿಬಿಎಂಪಿ ವತಿಯಿಂದ ವಿಶ್ವ ಪರಿಸರ ದಿನಾದಚರಣೆಯ ಅಂಗವಾಗಿ ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಿದರು. ಬಿಬಿಎಂಪಿ ಆರಣ್ಯ ಘಟಕದ ವತಿಯಿಂದ ಬೆಂಗಳೂರು ನಗರ ಹಸಿರೀಕರಣಕ್ಕೆ ಹಾಗೂ ಉದ್ಯಾನನಗರಿ ಎಂಬ ಖ್ಯಾತಿಯನ್ನು ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಅರಣ್ಯಕರಣ ಕಾರ್ಯಕ್ರಮಗಳನ್ನು ಕಳೆದ 2021-22 ಮತ್ತು 2022-23ನೇ ಸಾಲಿನಿಂದ ನಿರ್ವಹಿಸಲಾಗುತ್ತಿರುತ್ತದೆ ಎಂದು ತಿಳಿಸಿದ್ರು. ಪಾಲಿಕೆಯ ಅರಣ್ಯ ವಿಭಾಗದ ವಿವಿಧ ವಲಯಗಳ ವ್ಯಾಪ್ತಿಯಲ್ಲಿರುವ ಸಸ್ಯಕ್ಷೇತ್ರಗಳಲ್ಲಿ ವಿವಿಧ ಜಾತಿಯ ಸಸಿಗಳು ಲಭ್ಯವಿದ್ದು, “ವಿಶ್ವ ಪರಿಸರ ದಿನಾಚರಣೆ”ದಿನದಿಂದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಗುವುದು. ಈ ಸಂಬಂಧ ಆಸಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿ ಉಚಿತವಾಗಿ ಸಸಿಗಳನ್ನು ಪಡೆದುಕೊಂಡು ಸಸಿಗಳನ್ನು ನೆಟ್ಟು ಪೋಷಣೆ ಮಾಡಬಹುದು ಎಂದು ತಿಳಿಸಿದ್ರು.