ಕೆ.ಎಸ್.ಆರ್.ಟಿ.ಸಿ ನಿಗಮದ ಕೇಂದ್ರ ಕಛೇರಿಯ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಶ್ವ ಪರಿಸರ ದಿನದ ಅಂಗವಾಗಿ ಕೆ.ಎಸ್.ಆರ್.ಟಿ.ಸಿ ನಿಗಮದ ವ್ಯಾಪ್ತಿಯಲ್ಲಿರುವ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿನ ಬಸ್ ನಿಲ್ದಾಣಗಳು, ಘಟಕಗಳು, ಪ್ರಾದೇಶಿಕ ಕಾರ್ಯಾಗಾರಗಳು, ತರಬೇತಿ ಕೇಂದ್ರಗಳಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಅಧಿಕಾರಿ, ಮೇಲ್ವಿಚಾರಕ,ತಾಂತ್ರಿಕ, ಚಾಲನಾ ಸಿಬ್ಬಂದಿಗಳು ಇತರೆ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಸಿ ನೆಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಸಕ್ತ 2020-21ನೇ ಸಾಲಿನಲ್ಲಿ ಮುಂದಿನ ನಾಲ್ಕು ತಿಂಗಳುಗಳಲ್ಲಿ ಸಂಕಲ್ಪತರು ಫೌಂಡೇಶನ್ ವತಿಯವರ ಸಹಯೋಗದೊಂದಿಗೆ ಒಟ್ಟು 4500 ಗಿಡಗಳನ್ನು ನೆಡಲು ವಿಭಾಗವಾರು ಯೋಜನೆಯನ್ನು ರೂಪಿಸಲಾಗಿದೆ.