ರಾಮನಗರ: ಅಲ್ಲಿಇಲ್ಲಿ ಪ್ಲಾಸ್ಟಿಕ್ ಮೊಟ್ಟೆ, ಅಕ್ಕಿ, ಸಕ್ಕರೆ ಕಂಡುಬರುತ್ತಿದೆ ಎಂಬ ಸುದ್ದಿಯನ್ನು ನೋಡಿದ್ದೆವು. ಆದರೆ ಈಗ ರಾಜ್ಯದ ರಾಮನಗರ ಹಾಗೂ ಮಾಗಡಿ ಪಟ್ಟಣದಲ್ಲಿಯೂ ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ ಕಾಲಿಟ್ಟಿದ್ದು, ಜನತೆ ಕಂಗಾಲಾಗಿದ್ದಾರೆ. ಕನಕಪುರ ನಗರದ ಮನೆಯೊಂದರಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ ಪತ್ತೆಯಾಗಿದೆ. ಈ ಅಕ್ಕಿಯನ್ನು ಬೇಯಿಸಿದ ನಂತರ ಕುಟುಂಬದವರಿಗೆ ಪ್ಲಾಸ್ಟಿಕ್ ಅಕ್ಕಿ ಎಂದು ತಿಳಿದುಬಂದಿದೆ. ಇದೇ ವೇಳೆ ಮಾಗಡಿ ಪಟ್ಟಣದಲ್ಲಿ ಪ್ಲಾಸ್ಟಿಕ್ ಮೊಟ್ಟೆ ಪತ್ತೆಯಾಗಿ ಜನರಲ್ಲಿ ಆತಂಕ