ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟಿನಿಂದಲೂ ಕಾಂಗ್ರೆಸ್ ವಿರೋಧಿಯಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುವುದೇ ಕಾಯಕವಾಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ದಲಿತರು ಉನ್ನತ ಸ್ಥಾನದಲ್ಲಿದ್ದಾರೆ ಎನ್ನುವುದನ್ನು ಮರೆಯಬಾರದು ಎಂದರು. ರಾಜ್ಯ ಸರಕಾರದ ಅಭಿವೃದ್ಧಿ, ಜನಪರ ಯೋಜನೆಗಳನ್ನು ಸಹಿಸದ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಸರಕಾರದ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದೆ