ದೇಶದ ಮೇಲೆ ಎರಡನೇ ಸರ್ಜಿಕಲ್ ಸ್ಟ್ರೈಕ್ ನಡೆಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಟೀಕಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 50 ದಿನಗಳ ಹಿಂದೆ ನೋಟ್ ಬ್ಯಾನ್ ಮಾಡುವ ಮೂಲಕ ಪ್ರಧಾನಿ ಮೋದಿ ದೇಶದ ಮೇಲೆ ಮೊದಲ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದರು. ನಾಳೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ ಎರಡನೇ ಸರ್ಜಿಕಲ್ ಸ್ಟ್ರೈಕ್ಗೆ ಮುಂದಾಗಿದ್ದಾರೆ ಎಂದರು.