ಸಬ್ಸಿಡಿಗಳಿಗೆ ಕತ್ತರಿ ಕಾರ್ಪೊರೇಟ್ ಬಂಡವಾಳಿಗರ ಜೊತೆ ದೋಸ್ತಿ ಪ್ರಧಾನಿ ನರೇಂದ್ರ ಮೋದಿ ಅವರ 8 ವರ್ಷಗಳ ಸಾಧನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಶನಿವಾರ ಸಿದ್ದರಾಮಯ್ಯ ಬಿಡುಗಡೆ ಮಾಡಿದ ಮಾಧ್ಯಮ ಹೇಳಿಕೆ ವಿವರ ಇಲ್ಲಿದೆ. ಸಬ್ಸಿಡಿಗಳನ್ನು ನೀಡುವುದರಿಂದ ಆರ್ಥಿಕತೆಯು ವೇಗ ಪಡೆಯುತ್ತದೆ ಎಂಬುದು ಅಥÀðಶಾಸ್ತç ಗೊತ್ತಿರುವ ಪ್ರತಿಯೊಬ್ಬರಿಗೂ ಅರ್ಥವಾಗುತ್ತದೆ. ಆದರೆ ಮೋದಿ ಸರ್ಕಾರ ಮತ್ತು ಆ ಸರ್ಕಾರದ ಹಿಂದೆ ಇರುವ ಆರ್ಎಸ್ಎಸ್ ಪ್ರಣೀತ ಜನರಿಗೆ ಇದು ಅರ್ಥವಾಗುತ್ತಿಲ್ಲ.