ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಕಂಡ್ರೆ ಭಯ. ಆದ್ದರಿಂದಲೇ ಕರ್ನಾಟಕಕ್ಕೆ ಬಂದಾಗಲೆಲ್ಲಾ ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಕಂಡು ಮೋದಿಗೆ ಹೊಟ್ಟೆಯೂರಿ. ಆದ್ದರಿಂದ ನನ್ನ ಕಾಲೆಳೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರತಿ ಬಾರಿ ಕರ್ನಾಟಕಕ್ಕೆ ಬಂದಾಗ ನನ್ನ ವಿರುದ್ಧ ಕಿಡಿಕಾರುತ್ತಾರೆ. ಇದನ್ನು ನೋಡಿದ್ರೆ ಅವರಿಗೆ ನನ್ನ ಬಗ್ಗೆ ಭಯವಿದೆ ಎಂದನಿಸುತ್ತದೆ ಎಂದು ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧ ಜನತೆ