ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮಾತುಕತೆ ನಡೆಸಿವೆ ಎಂದು ದೇವೇಗೌಡ ಮತ್ತು ಕುಮಾರಸ್ವಾಮಿ ಅಂತಹ ಪ್ರಯತ್ನ ಮಾಡದಂತೆ ತಂತ್ರ ರೂಪಿಸಿದ್ದ ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಶಾಕ್ ಕೊಟ್ಟಿದ್ದಾರೆ.ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಬಿಜೆಪಿ ಜತೆ ಕುಮಾರಸ್ವಾಮಿ ಹೋದರೆ ಕುಟುಂಬದಿಂದಲೇ ಬಹಿಷಷ್ಕಾರ ಹಾಕುವುದಾಗಿ ದೇವೇಗೌಡರು ಎಚ್ಚರಿಸಿದ್ದರು. ಇದರಿಂದಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಬಾಗಿಲು ಮುಚ್ಚುವ ಹಂತಕ್ಕೆ ಬಂದಿತ್ತು.ಆದರೆ ನಿನ್ನೆ ಉಡುಪಿಯಲ್ಲಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ.