ಚಿಕ್ಕಬಳ್ಳಾಪುರ ಸ್ಪೋಟ ಪ್ರಕರಣ: ಪ್ರಧಾನಿ ಮೋದಿ ಸಂತಾಪ

ಚಿಕ್ಕಬಳ್ಳಾಪುರ| Krishnaveni K| Last Modified ಮಂಗಳವಾರ, 23 ಫೆಬ್ರವರಿ 2021 (10:57 IST)
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಪೋಟದಿಂದಾಗಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
 

ಜಿಲೆಟಿನ್ ಸ್ಪೋಟ ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಭ್ರಮರವಾಸಿನಿ ಕ್ರಷರ್ ನಿಂದ ಒಂದೂವರೆ ಕಿ.ಮೀ ದೂರದಲ್ಲಿರುವ ಅರಣ್ಯ ಪ್ರದೇಶಕ್ಕೆ ಒಂದು ಬೈಕ್ ಮತ್ತು ಟಾಟಾ ಏಸ್ ವಾಹನದಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು. ಅರಣ್ಯದೊಳಗೆ ಚಾಲಕನನ್ನು ಹೊರತುಪಡಿಸಿ ಉಳಿದವರು ಜಿಲೆಟಿನ್ ಹೊತ್ತು ನಡೆದಿದ್ದರು. ಈ ವೇಳೆ ಸ್ಪೋಟ ಸಂಭವಿಸಿದ್ದು, ಚಾಲಕನನ್ನು ಹೊರತುಪಡಿಸಿ ಉಳಿದವರು ಮೃತಪಟ್ಟಿದ್ದಾರೆ. ಇನ್ನು, ಘಟನೆ ಬಗ್ಗೆ ಸಿಎಂ ಯಡಿಯೂರಪ್ಪ ಉನ್ನತಮಟ್ಟದ ತನಿಖೆಗೆ ಆದೇಶಿದಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :