ಮಂಗಳೂರು: ಧರ್ಮಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ನೀಡಲಾಯಿತು. ಅದರ ಕೆಲವು ಝಲಕ್ ಗಳು ನಿಮಗಾಗಿ.. ದೇವಾಲಯಕ್ಕೆ ಬಂದ ಪ್ರಧಾನಿ ಮೋದಿಗೆ ಸ್ವತಃ ವೀರೇಂದ್ರ ಹೆಗ್ಗಡೆಯವರೇ ಮುಂದೆ ನಿಂತು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಪ್ರಧಾನಿ ಮೋದಿ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ಸಿಟಿ ರವಿ ಮುಂತಾದವರಿದ್ದರು. ದೇವಾಲಯದೊಳಗೆ ಪ್ರವೇಶಿಸಿದ ಪ್ರಧಾನಿ ಮೋದಿ ಸಾಂಪ್ರದಾಯಿಕವಾಗಿ ಶಾಲು ಹೊದ್ದುಕೊಂಡು ತೀರ್ಥ ಪ್ರಸಾದ ಸ್ವೀಕರಿಸಿದರು.