ಪ್ರಧಾನಿ ನರೇಂದ್ರ ಮೋದಿ ಜೂನ್ 21ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದು, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಜೊತೆ ಸಂವಾದ ನಡೆಸಿದ್ದು, ಕಾರ್ಯಕ್ರಮಗಳ ವಿವರ ಹಾಗೂ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆಯಲಿದೆ ಯೋಗ ದಿನಾಚರಣೆ