ಕರ್ನಾಟಕ ದೇಶದಲ್ಲಿಯೇ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರಕಾರವಿದ್ದಾಗ ಯಾವ ರೀತಿ ಭ್ರಷ್ಟಾಚಾರ ನಡೆದಿತ್ತು ಎಂದು ಯಡಿಯೂರಪ್ಪ ಅವರನ್ನೇ ಕೇಳಿದ್ರೆ ಹೇಳುತ್ತಿದ್ದರು ಎಂದು ಟಾಂಗ್ ನೀಡಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ತಮ್ಮ ಪಕ್ಕದಲ್ಲಿಯೇ ಕುಳಿತಿದ್ದ ಜೈಲಿಗೆ ಹೋಗಿ ಬಂದ ಯಡಿಯೂರಪ್ಪ ಅವರನ್ನು ಭ್ರಷ್ಟಾಚಾರದ ಬಗ್ಗೆ ಕೇಳಬೇಕಾಗಿತ್ತು. ಅವರು ಬಿಜೆಪಿ ಸರಕಾರದಲ್ಲಿ ಯಾವ ರೀತಿ