Widgets Magazine

ರಾಷ್ಟ್ರೀಯ “ಗೋಕುಲ ಮಿಷನ್”ಗೆ ಪ್ರಧಾನಿ ಚಾಲನೆ: ಕೆವಿಕೆಗಳಲ್ಲಿ ಲೈವ್

ಕಲಬುರಗಿ| Jagadeesh| Last Modified ಮಂಗಳವಾರ, 10 ಸೆಪ್ಟಂಬರ್ 2019 (17:34 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರ ಪ್ರದೇಶದ ಮಥುರಾದಲ್ಲಿ ಪಾಲ್ಗೊಳ್ಳುವ ಕಾರ್ಯಕ್ರಮ ಆಯ್ದ ಕೇಂದ್ರಗಳಲ್ಲಿ ನೇರ ಪ್ರಸಾರ ಆಗಲಿದೆ.

ಸೆಪ್ಟೆಂಬರ್ 11 ರಂದು ಬೆಳಿಗ್ಗೆ 10 ಗಂಟೆಗೆ ಉತ್ತರ ಪ್ರದೇಶದ ಮಥುರಾದಲ್ಲಿ “ಗೋಕುಲ ಮಿಷನ್” ಯೋಜನೆಯಡಿ ರಾಷ್ಟ್ರೀಯ ಕೃತಕ ಗರ್ಭಧಾರಣೆ ಕಾರ್ಯಕ್ರಮ ಮತ್ತು ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮಕ್ಕೆ ಮೋದಿ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆಯನ್ನು ಕಲಬುರಗಿ ನಗರದ ಆಳಂದ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಾಡಲಾಗಿದೆ.

ಕಲಬುರಗಿಯಲ್ಲಿನ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಿಸಲು ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಸೇರಿದಂತೆ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಇದಲ್ಲದೆ ಪಶುಸಂಗೋಪನೆಯಲ್ಲಿ ತೊಡಗಿರುವ ಜಿಲ್ಲೆಯ 100 ಪ್ರಗತಿಪರ ರೈತರು ಸಹ ಭಾಗವಹಿಸಲಿದ್ದಾರೆ. ದೇಶದಾದ್ಯಂತ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಏಕಕಾಲದಲ್ಲಿ ಈ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿದ್ದು,  ಅದರಂತೆ ಕರ್ನಾಟಕದ 17 ಜಿಲ್ಲೆಗಳ 38 ಕೆವಿಕೆನಲ್ಲಿ ಪ್ರಸಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರಲ್ಲಿ ಕಲಬುರಗಿ ಮತ್ತು ರದ್ದೇವಾಡಗಿ ಕೆವಿಕೆಗಳು ಸೇರಿವೆ.

ಪ್ರಧಾನಮಂತ್ರಿಯವರ ಭಾಷಣದ ನಂತರ ಸಾಂಕೇತಿಕವಾಗಿ  ತಜ್ಞರಿಂದ ರೈತರಿಗೆ ಜಾನುವಾರು ರೋಗಗಳು ಮತ್ತು ಲಸಿಕೆಗಳು, ವಿಶೇಷವಾಗಿ ಕಂದು ರೋಗ ಮತ್ತು ಕಾಲು ರೋಗದ ಬಗ್ಗೆ ಉಪನ್ಯಾಸ ಆಯೋಜಿಸಿದೆ.


ಇದರಲ್ಲಿ ಇನ್ನಷ್ಟು ಓದಿ :