ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಅಧ್ಯಯನ ನಡೆಸಿರುವ ಕಾಂಗ್ರೆಸ್ ಸತ್ಯಶೋಧನಾ ಸಮಿತಿಯು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪೊಲೀಸ್ ಸಿಬ್ಬಂದಿ ಮತ್ತು ವಾಹನಗಳನ್ನು ನಿಯೋಜಿಸುವಲ್ಲಿ ವಿಫಲವಾಗಿದೆ ಎಂದು ರಾಜ್ಯ ಸರ್ಕಾರವನ್ನು ದೂಷಿಸಿದೆ. ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದ ಸಮಿತಿಯು ಕೆಪಿಸಿಸಿಗೆ ಸಲ್ಲಿಸಿರುವ ತನ್ನ 31 ಪುಟಗಳ ವರದಿಯಲ್ಲಿ, ಸಾಮೂಹಿಕ ಅತ್ಯಾಚಾರ ಪ್ರಕರಣದ ನೈತಿಕ ಹೊಣೆಯನ್ನು ಪೊಲೀಸರು ಹೊತ್ತುಕೊಳ್ಳಬೇಕು