ಮೋಜು ಜೀವನ ನಡೆಸಲು ಬೆಂಗಳೂರಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಕೊಪ್ಪಳ ಮೂಲದ ವಿದ್ಯಾರ್ಥಿ ಸೇರಿ ಇಬ್ಬರು ಸರಗಳ್ಳರನ್ನು ಗಿರಿನಗರ ಪೊಲೀಸರು ಸೆರೆಹಿಡಿದಿದ್ದಾರೆ. ಸುರೇಶ್ ಬಂಧಿತನಾಗಿದ್ದು ಮತ್ತೋರ್ವ ಕಾನೂನುಸಂಘರ್ಷಕ್ಕೆ ಒಳಗಾದ ಬಾಲಕನಾಗಿದ್ದು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿ ಸುರೇಶ್ ನಗರದಲ್ಲಿ ಜ್ಯೊಮೊಟೊ ಕಂಪೆನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಸಹಜವಾಗಿ ಎಲ್ಲಾ ಏರಿಯಾಗಳ ಬಗ್ಗೆ ತಿಳಿದುಕೊಂಡಿದ್ದ. ಸುಲಭವಾಗಿ ಹಣ ಸಂಪಾದನೆ ಮಾಡಲು ಸರಗಳ್ಳತನ ಮಾಡಲು ಸಂಚು ರೂಪಿಸಿದ್ದ. ತನ್ನದೇ