ಮಟ್ಕಾ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸರು ದಾಳಿ ನಡೆಸಿ, ಇಬ್ಬರು ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಲಿಂಗಸೂಗೂರು ಪಟ್ಟಣದ ಅಜಾದ್ ನಗರದಲ್ಲಿ ಮಿಠಾಯಿ ಅಂಗಡಿ ಮುಂದೆ ಮಹ್ಮದ್ ದರ್ವೇಶ್ ಭಾವಾಸಾಬಬ್, ಜಾಮೀರ್ ಖಾಜಾಹುಸೇನ್ ಎನ್ನುವವರು ಮಟ್ಕಾ ದಂಧೆಯಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ. ಖಚಿತ ಮಾಹಿತಿ ಪಡೆದ ಲಿಂಗಸೂಗೂರು ಪೊಲೀಸರು ಅಡ್ಡೆಯ ಮೇಲೆ ದಾಳಿ ನಡೆಸಿ 20,353 ರೂ. ನಗದು